ನವದೆಹಲಿ: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಜಯ ಗಳಿಸಿದ್ದು ಸತತ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡಲು ಎಲ್ಲಾ ಸಿದ್ಧತೆಗಳು ನಡೆದಿವೆ.
ಶುಕ್ರವಾರ ನಡೆದ ಎನ್‌ಡಿಎ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅರವನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಅವರು ಇಂದು (ಜೂನ್.9) ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ಭವನ ಸಭಾಂಗಣದಲ್ಲಿ ಇಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ ಹಲವು ಸಂಪುಟ ಸಚಿವರು ಸಹಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ಈ ಸುದ್ದಿ ಸಮಾರಂಭವನ್ನು ನಾಗರೀಕರು ಎಕ್ಸ್ (X) ನಂತಹ ಸಾಮಾಜಿಕ ಮಾಧ್ಯಮ, ಸುದ್ದಿ ವಾಹಿನಿಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.
ಇಂದು ಸಂಜೆ 7.15 ಗಂಟೆಗೆ ಪ್ರಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಸುಮಾರು 8000ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಪ್ರಮಾಣವಚನ ಸಮಾರಂಭದ ನಂತರ ಗಣ್ಯರೆಲ್ಲರಿಗೂ ಸೇರಿದಂತೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟ ಏರ್ಪಡಿಸಲಾಗಿದೆ.
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…