Mysore
21
overcast clouds
Light
Dark

ಜೂನ್‌.9 ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ!

ನವದೆಹಲಿ: ನರೇಂದ್ರ ಮೋದಿ ಅವರು ಇದೇ ಜೂನ್‌.9 ರಂದು ಸಂಜೆ 7.15 ನಿಮಿಷಕ್ಕೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮ ರಾಷ್ಟ್ರಪತಿ ಭವನದಲ್ಲಿ ಜರುಗಲಿದೆ.

ಈ ಸಂಬಂದ ಪ್ರೆಸಿಡೆಂಟ್‌ ಆಫ್‌ ಇಂಡಿಯಾ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದರಲ್ಲಿ ಪ್ರಧಾನ ಮಂತ್ರಿ ಹಾಗೂ ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂನ್‌.9 ರಂದು ಸಂಜೆ 7.15 ನಿಮಿಷಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಪ್ರಮಾಣವಚನ ಹಾಗೂ ಗೌಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ ಎಂದು ಬರೆದುಕೊಂಡಿದೆ.