ದೇಶ- ವಿದೇಶ

ರಾಷ್ಟ್ರೀಯ ವಿಜ್ಞಾನ ದಿನ| ವಿಜ್ಞಾನವನ್ನು ವಿಕಸಿತ ಭಾರತ ನಿರ್ಮಾಣಕ್ಕೆ ಬಳಸಿ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ನಿರ್ಮಾಣಕ್ಕೆ ವಿಜ್ಞಾನವನ್ನು ಬಳಸಿಕೊಳ್ಳುವಂತೆ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವವರಿಗೆ, ವಿಶೇಷವಾಗಿ ನಮ್ಮ ಯುವ ಅವಿಷ್ಕಾರರಿಗೆ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ವಿಜ್ಞಾನ ಹಾಗೂ ನಾವೀನ್ಯತೆಗಳನ್ನು ಜನಪ್ರಿಯಗೊಳಿಸೋಣ. ವಿಕಸಿತ ಭಾರತವನ್ನು ನಿರ್ಮಿಸಲು ವಿಜ್ಞಾನವನ್ನು ಬಳಸಕೊಳ್ಳೋಣ ಎಂದು ತಿಳಿಸಿದ್ದಾರೆ.

ನಮ್ಮ ವಿದ್ಯಾರ್ಥಿಗಳು ಹಾಗೂ ಯುವಕರು ವಿಜ್ಞಾನದಲ್ಲಿ ಆಸಕ್ತಿ ಮತ್ತು ಉತ್ಸಾಹ ಹೊಂದಿರುವುದು ಬಹಳ ಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಇದಕ್ಕೆ ನನ್ನ ಬಳಿ ಒಂದು ಯೋಜನೆ ಇದೆ. ಇದನ್ನು ನೀವು ವಿಜ್ಞಾನಿಯಾಗಿ ಒಂದು ದಿನ ಎಂದು ಕರೆಯಬಹುದು. ಅಂದರೆ ನೀವು ಒಂದು ದಿನವನ್ನು ವಿಜ್ಞಾನಿಯಾಗಿ ಕಳೆಯಲು ಪ್ರಯತ್ನಿಸಬೇಕು. ನೀವು ಯಾವುದೇ ದಿನವನ್ನು ನಿಮ್ಮ ಅನುಕೂಲ ಹಾಗೂ ಉಪಯೋಗಕ್ಕೆ ತಕ್ಕಂತೆ ಆಯ್ಕೆ ಮಾಡಿಕೊಳ್ಳಬಹುದು. ಹೀಗಾಗಿ ಮುಂದಿನ ದಿನಗಳಲ್ಲಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಸಂಭ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಫೆಬ್ರವರಿ.23 ರ ಮನ್‌ ಕಿ ಬಾತ್‌ನ 119ನೇ ಸಂಚಿಕೆಯಲ್ಲಿ, ವಿದ್ಯಾರ್ಥಿಗಳು ಹಾಗೂ ಯುವಕರಲ್ಲಿ ವಿಜ್ಞಾನದ ಬಗ್ಗೆ ಕುತೂಹಲವನ್ನು ಬೆಳೆಸುವುದಾಗಿ ಹೇಳಿದ್ದರು. ಅಂತೆಯೇ ಒಂದು ದಿನ ವಿಜ್ಞಾನಿಗಳಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುವಂತೆ ಕರೆ ನೀಡಿದ್ದರು. ಅದನ್ನು ಇಂದು ಸ್ಮರಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

4 mins ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

10 mins ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

11 mins ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

12 mins ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

13 mins ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

13 mins ago