ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೊಡಾ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದೆ.
ಚಾರ್ಜ್‌ಶೀಟ್‌ನಲ್ಲಿ ಸೋನಿಯಾಗಾಂಧಿ ಎ.1 ಹಾಗೂ ರಾಹುಲ್ ಗಾಂಧಿ ಎ2 ಆಗಿದ್ದು, ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣ ಸಂಬಂಧ ಏಪ್ರಿಲ್.25ಕ್ಕೆ ಕೋರ್ಟ್ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿದೆ.
ಒಟ್ಟು 700 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿಗೆ ಇಡಿ ಮುಂದಾಗಿದ್ದು, ದೆಹಲಿ, ಮುಂಬೈನ ಬಾಂದ್ರಾ ಪ್ರದೇಶ ಮತ್ತು ಲಕ್ನೋದ ಬಿಶೇಶ್ವರ್ ನಾಥ್ ರಸ್ತೆಯಲ್ಲಿರುವ ಎಜೆಎಲ್ ಕಟ್ಟಡದಲ್ಲಿರುವ ಆಸ್ತಿಗಳ ಮೇಲೆ ನೋಟಿಸ್‌ಗಳನ್ನು ಅಂಟಿಸಲಾಗಿದೆ.