ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಇದನ್ನು ಓದಿ: ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿಯ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದೆ. ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಪ್ರಮಾಣ, ಯಾವ ರೀತಿಯಲ್ಲಿ ದೇಣಿಗೆ ಕೊಡಲಾಗಿದೆ ಎಂಬುದರ ಮಾಹಿತಿ, ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್‌ಗೂ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…