national security advisory
ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ (ಎನ್‌ಎಸ್‌ಎಬಿ)ಯ ಅಧ್ಯಕ್ಷರಾಗಿ ಅಲೋಕ್ ಜೋಶಿ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಭಾರತದ ಬಾಹ್ಯ ಗುಪ್ತಚರ ಸಂಸ್ಥೆ, ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್(R&AW)ನ ಮಾಜಿ ಮುಖ್ಯಸ್ಥರಾದ ಜೋಶಿ ಅವರು ಇದೀಗ ಎನ್‌ಎಸ್‌ಎಬಿ ಯ ಸಾರಥ್ಯ ವಹಿಸಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರದ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಎನ್ನುವ ನಡುವೆ, ಅದರ ಗಡಿಯಾಚೆಗಿನ ಸಂಪರ್ಕಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಬದಲಾವಣೆ ಮಾಡಿದೆ.
ಮಾಜಿ ವಾಯುಸೇನೆ ಕಮಾಂಡರ್ ಏರ್ ಮಾರ್ಷಲ್ ಪಿ.ಎಂ ಸಿನ್ಹಾ, ಲೆ.ಜನರಲ್ ಎ.ಕೆ ಸಿಂಗ್ ಮತ್ತು ನಿವೃತ್ತ ಅಡ್ಮಿರಲ್ ಮೊಂಟಿ ಖನ್ನ ಅವರನ್ನು ಮಂಡಳಿಯ ಸದಸ್ಯರಾಗಿ ನೇಮಿಸಿದೆ.
ಇವರಲ್ಲದೆ, ಮಾಜಿ ರಾಜತಾಂತ್ರಿಕ ಅಧಿಕಾರಿ ಬಿ.ವೆಂಕಟೇಶ್ ವರ್ಮಾ, ನಿವೃತ್ತ ಐಪಿಎಸ್ ರಾಜೀವ್ ರಂಜನ್ ವರ್ಮಾ ಅವರನ್ನೂ ಮಂಡಳಿಯ ಸದಸ್ಯರಾಗಿ ನೇಮಿಸಲಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…