Mysore
32
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದ ಗಜುವಾಕ ಪ್ರದೇಶದಲ್ಲಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆರೋಪಿಯು ಕೃತ್ಯದ ಬಳಿಕ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎಂದಿದ್ದಾರೆ. ಆರೋಪಿಯನ್ನು ಭಾರತೀಯ ಐಎನ್‌ಎಸ್‌ ದೇಗಾದಲ್ಲಿ ನಿಯೋಜಿತನಾಗಿದ್ದ ರವೀಂದ್ರ(35) ಎಂದು ಗುರುತಿಸಲಾಗಿದೆ. ಮೌನಿಕಾ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ.

ಆರೋಪಿ 2021ರಲ್ಲಿ ಡೇಟಿಂಗ್ ಅಪ್‌ ಮೂಲಕ ಪರಿಚಯವಾದ ಮೌನಿಕಾ ಜೊತೆ ಸಂಬಂಧ ಬೆಳೆಸಿದ್ದನು. ಆರೋಪಿಯ ಪತ್ನಿ ಕೆಲವು ವಾರಗಳ ಹಿಂದೆ ತನ್ನ ಸ್ವಗ್ರಾಮಕ್ಕೆ ಹೋಗಿದ್ದ ಕಾರಣ ರವೀಂದ್ರ ಒಬ್ಬನೇ ಮನೆಯಲ್ಲಿದ್ದನು. ಈ ವೇಳೆ ಆತ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದನು. ಇಬ್ಬರ ನಡುವೆ ಹಣ ಮತ್ತು ಸಂಬಂಧದ ವಿಚಾರದಲ್ಲಿ ಜಗಳವಾದ ನಂತರ ರವೀಂದ್ರ ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ನಂತರ ಶವವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗಗಳನ್ನು ತನ್ನ ಮನೆಯ ಫ್ರಿಡ್ಜ್‌ನಲ್ಲಿಟ್ಟಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.

ಈ ಘಟನೆಯು 2022ರಲ್ಲಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣವನ್ನು ನೆನಪಿಸುತ್ತಿದೆ.

Tags:
error: Content is protected !!