ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದ ಗಜುವಾಕ ಪ್ರದೇಶದಲ್ಲಿ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆರೋಪಿಯು ಕೃತ್ಯದ ಬಳಿಕ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎಂದಿದ್ದಾರೆ. ಆರೋಪಿಯನ್ನು ಭಾರತೀಯ ಐಎನ್‌ಎಸ್ ದೇಗಾದಲ್ಲಿ ನಿಯೋಜಿತನಾಗಿದ್ದ ರವೀಂದ್ರ(35) ಎಂದು ಗುರುತಿಸಲಾಗಿದೆ. ಮೌನಿಕಾ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ.
ಆರೋಪಿ 2021ರಲ್ಲಿ ಡೇಟಿಂಗ್ ಅಪ್ ಮೂಲಕ ಪರಿಚಯವಾದ ಮೌನಿಕಾ ಜೊತೆ ಸಂಬಂಧ ಬೆಳೆಸಿದ್ದನು. ಆರೋಪಿಯ ಪತ್ನಿ ಕೆಲವು ವಾರಗಳ ಹಿಂದೆ ತನ್ನ ಸ್ವಗ್ರಾಮಕ್ಕೆ ಹೋಗಿದ್ದ ಕಾರಣ ರವೀಂದ್ರ ಒಬ್ಬನೇ ಮನೆಯಲ್ಲಿದ್ದನು. ಈ ವೇಳೆ ಆತ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದನು. ಇಬ್ಬರ ನಡುವೆ ಹಣ ಮತ್ತು ಸಂಬಂಧದ ವಿಚಾರದಲ್ಲಿ ಜಗಳವಾದ ನಂತರ ರವೀಂದ್ರ ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ನಂತರ ಶವವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಕೆಲವು ಭಾಗಗಳನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗಗಳನ್ನು ತನ್ನ ಮನೆಯ ಫ್ರಿಡ್ಜ್‌ನಲ್ಲಿಟ್ಟಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.
ಈ ಘಟನೆಯು 2022ರಲ್ಲಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣವನ್ನು ನೆನಪಿಸುತ್ತಿದೆ.
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…