Mysore
17
few clouds

Social Media

ಶನಿವಾರ, 24 ಜನವರಿ 2026
Light
Dark

ನಕ್ಸಲರ ಕಾರ್ಯಾಚರಣೆ: ಸಾವಿನ ಸಂಖ್ಯೆ 31ಕ್ಕೆ ಏರಿಕೆ

ಛತ್ತಿಸ್‌ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರ ಸಾವಿನ ಸಂಖ್ಯೆ ಸುಮಾರು 31ಕ್ಕೆ ಏರಿಕೆ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತಿಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಇಂದಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯ ಸಮೀಪ ನಕ್ಸಲರ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಾಮಿಕ ವರದಿಯಿಂದ ತಿಳಿದುಬಂದಿದೆ.

ಘಟನಾ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಗಾಗಿ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

 

Tags:
error: Content is protected !!