ಛತ್ತಿಸ್‌ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರ ಸಾವಿನ ಸಂಖ್ಯೆ ಸುಮಾರು 31ಕ್ಕೆ ಏರಿಕೆ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತಿಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಂದಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯ ಸಮೀಪ ನಕ್ಸಲರ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಾಮಿಕ ವರದಿಯಿಂದ ತಿಳಿದುಬಂದಿದೆ.
ಘಟನಾ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಗಾಗಿ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…