ಕೇರಳ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕರ್ನಾಟಕದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಅಲಿಯಾಸ್ ಪ್ರದೀಪ್ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.
ಇತ್ತೀಚೆಗೆ ಕೇರಳ-ಕರ್ನಾಟಕ ಗಡಿಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ತಂಡದೊಂದಿಗೆ ಸಂಚರಿಸುತ್ತಿದ್ದಾಗ ಸುರೇಶ್ ಕಾಡಾನೆ ದಾಳಿಗೆ ತುತ್ತಾಗಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಆರು ಜನರಿದ್ದ ನಕ್ಸಲೀಯರ ತಂಡ ಗಡಿಭಾಗದ ಕಂಜಿರಕೊಲ್ಲಿ ಚಿತ್ತಾರಿ ಕಾಲನಿಯಲ್ಲಿ ಬಿಟ್ಟು ಹೋಗಿತ್ತು. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಸುರೇಶ್ನನ್ನು ಕಣ್ಣೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು.
ಸುರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಪೊಲೀಸರಿಗೆ ಶರಣಾಗುವ ಸಂದರ್ಭ ಗಾಲಿ ಖುರ್ಚಿಯಲ್ಲಿ ಕುಳಿತು ಮಾಧ್ಯಮದವರೊಂದಿಗೆ ಮಾತನಾಡಿ, ತಾನು ಬಹು ಕಾಲದ ಹಿಂದೆಯೇ ಶರಣಾಗಲು ಬಯಸಿದ್ದೆ. ನಾನು ಕಳೆದ 23 ವರ್ಷಗಳಿಂದ ಮಾವೋವಾದಿಯಾಗಿದ್ದೆ, ಈಗ ಶರಣಾಗುತ್ತಿದ್ದೇನೆ. ಮಾವೋವಾದಿಯಾದ ಬಳಿಕವೂ ನನಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಹಲವು ವರ್ಷಗಳ ಬಳಿಕವೂ ನಮಗೆ ಕೇರಳ, ತಮಿಳುನಾಡು ಅಥವಾ ಕರ್ನಾಟಕದಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…