Mysore
22
broken clouds

Social Media

ಗುರುವಾರ, 13 ಮಾರ್ಚ್ 2025
Light
Dark

ಛತ್ತೀಸ್‌ಗಢ: ಇಬ್ಬರು ವ್ಯಕ್ತಿಗಳನ್ನು ಕತ್ತುಕೊಯ್ದು ಹತ್ಯೆ ಮಾಡಿದ ನಕ್ಸಲರು

ಬಿಜಾಪುರ: ಛತ್ತೀಸ್‌ಗಢ ರಾಜ್ಯದ ಬಿಜಾಪುರ ಜಿಲ್ಲೆಯ ಹಳ್ಳಿವೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ ನಕ್ಸಲರು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯೂ ಇಲ್ಲಿನ ತರ್ರೆಮ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರನ್ನು ರಾಜು(32) ಹಾಗೂ ಮುನ್ನಾ(27) ಎಂದು ಗುರುತಿಸಲಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಮೃತಪಟ್ಟ ಅವರಿಬ್ಬರನ್ನು ನಕ್ಸಲರು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಮೃತಪಟ್ಟ ಇಬ್ಬರು ವ್ಯಕ್ತಿಗಳು ತಮ್ಮ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಅಲ್ಲದೇ ನಕ್ಸಲರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Tags: