ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಒಂದು ಅಧ್ಯಾಯವನ್ನು ಸೇರಿಸಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೇಷರತ್ತಾಗಿ ಕಾರಣವಿಲ್ಲದೆ ಕ್ಷಮೆಕೇಳಿ ಸಂಪೂರ್ಣ ಪುಸ್ತಕವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಘೋಷಿಸಿದೆ.
‘ಎಕ್ಸ್‌ಪ್ಲೋರಿಂಗ್ ಸೊಸೈಟಿ
ಇಂಡಿಯಾ ಅಂಡ್ ಬಿಯಾಂಡ್ ಗ್ರೇಡ್ 8 ಪಾರ್ಟ್ 2’ ಎಂಬ ಪಠ್ಯದಲ್ಲಿ ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಅಧ್ಯಾಯವಿದ್ದು, ಅದರಲ್ಲಿ ಭ್ರಷ್ಟಾಚಾರ, ಪ್ರಕರಣಗಳ ಹೆಚ್ಚಿನ ಬಾಕಿ ಪ್ರಮಾಣ ಮತ್ತು ನ್ಯಾಯಾಧೀಶರ ಕೊರತೆ ಮುಂತಾದವುಗಳನ್ನು ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳೆಂದು ಉಲ್ಲೇಖಿಸಲಾಗಿತ್ತು.
ಪ್ರಕಟಣೆಯಲ್ಲಿ ಎನ್‌ಸಿಇಆರ್‌ಟಿ ನಿರ್ದೇಶಕರು ಮತ್ತು ಪರಿಷತ್ತಿನ ಸದಸ್ಯರು ಬೇಷರತ್ತಾಗಿ ಸಂಪೂರ್ಣ ಕ್ಷಮೆಯಾಚನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ, ಆ ಪುಸ್ತಕವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ, ಅದು ಈಗ ಮಾರುಕಟ್ಟೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ವಿವಾದವು ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರು ತುರ್ತು ವಿಚಾರಣೆಗೆ ವಿಷಯವನ್ನು ಉಲ್ಲೇಖಿಸಿದ ನಂತರ ಸರ್ವೋಚ್ಚ ನ್ಯಾಯಾಲಯಕ್ಕೆ ತಲುಪಿತು.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರೊಂದಿಗೆ, ಪಠ್ಯಪುಸ್ತಕದಲ್ಲಿ ನ್ಯಾಯಾಂಗದ ಕುರಿತು ಮಾಡಲಾದ ‘ಆಕ್ಷೇಪಾರ್ಹ’ ಉಲ್ಲೇಖಗಳ ಕುರಿತು ಸ್ವಯಂ ಪ್ರೇರಿತವಾಗಿ ಕೇಸು ಕೈಗೆತ್ತಿಕೊಂಡಿತ್ತು.
ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿಗಳು, ಶಾಲಾ ಪಠ್ಯಕ್ರಮದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಉಲ್ಲೇಖಗಳನ್ನು ಸೇರಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಭೂಮಿಯ ಮೇಲೆ ಯಾರಿಗೂ ನ್ಯಾಯಾಂಗವನ್ನು ಅಪಮಾನಗೊಳಿಸಲು ಅಥವಾ ಅದರ ನೈತಿಕತೆಯನ್ನು ಕಳಂಕಗೊಳಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…