ದೇಶ- ವಿದೇಶ

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಒಂದು ಅಧ್ಯಾಯವನ್ನು ಸೇರಿಸಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೇಷರತ್ತಾಗಿ ಕಾರಣವಿಲ್ಲದೆ ಕ್ಷಮೆಕೇಳಿ ಸಂಪೂರ್ಣ ಪುಸ್ತಕವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಘೋಷಿಸಿದೆ.

‘ಎಕ್ಸ್‌ಪ್ಲೋರಿಂಗ್ ಸೊಸೈಟಿ
ಇಂಡಿಯಾ ಅಂಡ್ ಬಿಯಾಂಡ್ ಗ್ರೇಡ್ 8 ಪಾರ್ಟ್ 2’ ಎಂಬ ಪಠ್ಯದಲ್ಲಿ ‘ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಅಧ್ಯಾಯವಿದ್ದು, ಅದರಲ್ಲಿ ಭ್ರಷ್ಟಾಚಾರ, ಪ್ರಕರಣಗಳ ಹೆಚ್ಚಿನ ಬಾಕಿ ಪ್ರಮಾಣ ಮತ್ತು ನ್ಯಾಯಾಧೀಶರ ಕೊರತೆ ಮುಂತಾದವುಗಳನ್ನು ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳೆಂದು ಉಲ್ಲೇಖಿಸಲಾಗಿತ್ತು.

ಪ್ರಕಟಣೆಯಲ್ಲಿ ಎನ್‌ಸಿಇಆರ್‌ಟಿ ನಿರ್ದೇಶಕರು ಮತ್ತು ಪರಿಷತ್ತಿನ ಸದಸ್ಯರು ಬೇಷರತ್ತಾಗಿ ಸಂಪೂರ್ಣ ಕ್ಷಮೆಯಾಚನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ, ಆ ಪುಸ್ತಕವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ, ಅದು ಈಗ ಮಾರುಕಟ್ಟೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವಿವಾದವು ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರು ತುರ್ತು ವಿಚಾರಣೆಗೆ ವಿಷಯವನ್ನು ಉಲ್ಲೇಖಿಸಿದ ನಂತರ ಸರ್ವೋಚ್ಚ ನ್ಯಾಯಾಲಯಕ್ಕೆ ತಲುಪಿತು.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರೊಂದಿಗೆ, ಪಠ್ಯಪುಸ್ತಕದಲ್ಲಿ ನ್ಯಾಯಾಂಗದ ಕುರಿತು ಮಾಡಲಾದ ‘ಆಕ್ಷೇಪಾರ್ಹ’ ಉಲ್ಲೇಖಗಳ ಕುರಿತು ಸ್ವಯಂ ಪ್ರೇರಿತವಾಗಿ ಕೇಸು ಕೈಗೆತ್ತಿಕೊಂಡಿತ್ತು.

ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿಗಳು, ಶಾಲಾ ಪಠ್ಯಕ್ರಮದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಉಲ್ಲೇಖಗಳನ್ನು ಸೇರಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಭೂಮಿಯ ಮೇಲೆ ಯಾರಿಗೂ ನ್ಯಾಯಾಂಗವನ್ನು ಅಪಮಾನಗೊಳಿಸಲು ಅಥವಾ ಅದರ ನೈತಿಕತೆಯನ್ನು ಕಳಂಕಗೊಳಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿದರು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

47 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

48 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

51 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

53 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

58 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago