Mysore
20
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌

modi

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿಂದು ನಾಮಪತ್ರ ಸಲ್ಲಿಸಿದರು.

ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ಪ್ರತಿ ಸೆಟ್‌ನಲ್ಲಿ 20 ಪ್ರಸ್ತಾವಕರು ಹಾಗೂ 20 ಅನುಮೋದಕರು ಸಹಿ ಹಾಕಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಕೇಂದ್ರ ಸಚಿವರು, ಹಿರಿಯ ಸಚಿವರು, ಹಿರಿಯ ಸಂಸದರು ಹಾಗೂ ಪ್ರಮುಖ ಮೈತ್ರಿಕೂಟದ ನಾಯಕರ ಹೆಸರುಗಳನ್ನು ದಾಖಲೆಯಲ್ಲಿ ಹೆಸರಿಸಲಾಗಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ರಾಧಾಕೃಷ್ಣನ್‌ ಅವರನ್ನು ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸಮರ್ಪಣೆ, ನಮ್ರತೆ ಹಾಗೂ ಬುದ್ದಿಶಕ್ತಿ ಹೊಂದಿರುವ ನಾಯಕ ಎಂದು ಬಣ್ಣಿಸಿದ್ದಾರೆ.

Tags:
error: Content is protected !!