ನವದೆಹಲಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ.
ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟ ಬಹುಮತವನ್ನು ಪಡೆದಿದೆ.
ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ ಗೆದ್ದರೆ ಮಿತ್ರ ಪಕ್ಷಗಳಾದ ಎನ್‌ಸಿಪಿ ಮತ್ತು ರಾಷ್ಟ್ರೀಯ ಲೋಕ ಮಂಚ್‌ನ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಇನ್ನೊಂದು ಸ್ಥಾನವನ್ನು ಕಾಂಗ್ರೆಸ್ ಪಕ್ಷ ತೆಲಂಗಾಣದಿಂದ ಗೆದ್ದುಕೊಂಡಿದೆ.
ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದಾರೆ. ರಾಜ್ಯಸಭೆಯ 10 ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಆರ್‌ಎಸ್‌ನ ಕೇಶವ ರಾವ್ ಹಾಗೂ ಬಿಜೆಡಿಯ ಮಮತಾ ಮೊಹಾಂತ ಅವರು ಕ್ರಮವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಸೇರುವ ಮುನ್ನ ರಾಜೀನಾಮೆ ನೀಡಿದ್ದರಿಂದ 12 ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು.
ಮೋದಿ ಸರ್ಕಾರ ಎರಡೂ ಅವಧಿಯಲ್ಲಿ ಎನ್‌ಡಿಎ ಮತ್ತು ಯುಪಿಎ ಹೊರತಾದ ಪಕ್ಷಗಳ ಸದಸ್ಯರ ಬಲದಿಂದ ರಾಜ್ಯಸಭೆಯಲ್ಲಿ ಮಸೂದೆಗಳನ್ನು ಪಾಸ್ ಮಾಡುತ್ತಿತ್ತು. ಈಗ ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಇನ್ನು ಹಲವು ಮಸೂದೆಗಳನು ಪಾಸ್ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…