Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮೋದಿ ಪ್ರಮಾಣವಚನ ಸಮಾರಂಭಕ್ಕೆ “ಇಂಡಿಯಾ”ಗೆ ಆಹ್ವಾನ ನೀಡಿಲ್ಲ: ಜೈರಾಮ್‌ ರಮೇಶ್‌

ನವದೆಹಲಿ: ಇಂದು (ಭಾನುವಾರ, ಜೂನ್‌.9) ನಡೆಯಲಿರುವ ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟವಾದ “ಇಂಡಿಯಾ”ಗೆ ಆಹ್ವಾನ ನೀಡಿಲ್ಲ. ಹಾಗಾಗಿ ಈ ಸಮಾರಂಭದಲ್ಲಿ ನಾವು ಭಾಗವಹಿಸುವದಿಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೈರಾಮ್‌ ರಮೇಶ್‌ ಅವರು ಹೇಳಿದ್ದಾರೆ.
ಈ ಸಂಬಂಧ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೂನ್‌. 9ರಂದು ನಡೆಯುವ ಪ್ರಮಾಣವಚನಕ್ಕೆ ಐಎನ್‌ಡಿಐಎ ಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಈ ಸಮಾರಂಭಕ್ಕೆ ರಾಷ್ಟ್ರೀಯ, ಅಂತರಾಷ್ಟ್ರೀಯ ನಾಯಕರಿಗೆ ಆಹ್ವಾನ ಬಂದಿದೆ. ಆದರೆ ನಮ್ಮ ನಾಯಕರಿಗೆ ಇನ್ನು ಆಹ್ವಾನ ಬಂದಿಲ್ಲ. ಬಂದಾಗ ನಾವು ಅದರ ಬಗ್ಗೆ ಯೋಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.
Tags:
error: Content is protected !!