ದೇಶ- ವಿದೇಶ

ಮೆಗ ಗೆಲುವಿನತ್ತ ಎನ್‌ಡಿಎ ದಾಪುಗಾಲು ; ಮಹಾಘಟ್ಬಂಧನ್‌ಗೆ ಭಾರಿ ಹಿನ್ನೆಡೆ

ಬಿಹಾರ : ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಭವಿಷ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆ ಚಾಲ್ತಿಯಲ್ಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪ್ರಬಲ ಪೈಪೋಟಿ ನೀಡಿದೆ. ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ʻಜನ್ ಸುರಾಜ್ʼ ಪಕ್ಷದ ಪ್ರವೇಶವು ಫಲಿತಾಂಶದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಮೆಗಾ ಗೆಲುವಿನತ್ತ ಎನ್‌ಡಿಎ
ಎನ್‌ಡಿಎ ಕಂಡು ಕೇಳರಿಯದ ಗೆಲುವಿನತ್ತ ಮುಖ ಮಾಡಿದ್ದು, 182 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 81 ಹಾಗೂ ಜೆಡಿಯು 74 ಸ್ಥಾನಗಳಲ್ಲಿ ಮುಂದಿದ್ದು, ಮಹಾಘಟಬಂಧನ್‌ ಹೀನಾಯ ಸೋಲಿನತ್ತ ಮುಖ ಮಾಡಿದೆ. ಕೇವಲ 57 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆರ್‌ಜೆಡಿ 42 ಹಾಗೂ ಕಾಂಗ್ರೆಸ್‌ ಕೇವಲ 8 ಸ್ಥಾನಗಳಲ್ಲಿ ಮುಂದಿವೆ.

ಇದನ್ನು ಓದಿ : ಬಿಹಾರ | ರಸ್ತೆ ಬದಿ ವಿವಿಪ್ಯಾಟ್‌ ಚೀಟಿಗಳ ರಾಶಿ ಪತ್ತೆ ; ಅಧಿಕಾರಿ ಅಮಾನತು

ಬಿಜೆಪಿ ಅತಿದೊಡ್ಡ ಪಕ್ಷ
ಸ್ಪರ್ಧಿಸಿದ 101 ಸ್ಥಾನಗಳಲ್ಲಿ ಬಿಜೆಪಿ ಬರೋಬ್ಬರಿ 78ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಭಾರೀ ಗೆಲುವಿನತ್ತ ಮುಖಮಾಡಿದೆ. ಇದೇ ಟ್ರೆಂಡ್‌ ಮುಂದುವರಿದಲ್ಲಿ, ಬಿಜೆಪಿ ಬಿಹಾರದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.

ಭರ್ಜರಿ ಗೆಲುವಿನತ್ತ ಎನ್‌ಡಿಎ
151 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿದ್ದು, ಭರ್ಜರಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಎಂಜಿಬಿ ಮುನ್ನಡೆಯಲ್ಲಿ ಇಳಿಕೆಯಾಗಿದ್ದು, 87 ಸ್ಥಾನಗಳಿಗೆ ಕುಸಿದಿದೆ.

ಸೆಂಚುರಿ ಬಾರಿಸಿದ ಮಹಾಘಟಬಂಧನ್‌
ಮುನ್ನಡೆಯಲ್ಲಿ ಮಹಾಘಟಬಂಧನ್‌ ಕೂಡ ಸೆಂಚುರಿ ದಾಟಿದೆ. ಒಟ್ಟಾರೆ 102 ಕ್ಷೇತ್ರಗಳಲ್ಲಿ ಎಂಜಿಬಿ ಮುಂದಿದ್ದು, ಆರ್‌ಜೆಡಿ 73 ಹಾಗೂ ಕಾಂಗ್ರೆಸ್‌ 19 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಎನ್‌ಡಿಎ 137 ಕ್ಷೇತ್ರಗಳಲ್ಲಿ ಮುಂದಿದ್ದು, ಮ್ಯಾಜಿಕ್‌ ಮಾರ್ಕ್‌ ದಾಟಿದೆ.

ಇದನ್ನು ಓದಿ: ಬಿಹಾರ ಚುನಾವಣೆಯಲ್ಲೂ ವೋಟ್‌ ಚೋರಿ: ಸಚಿವ ಭೋಸರಾಜು

98 ಸ್ಥಾನಗಳಲ್ಲಿ ಮಹಾಘಟಬಂಧನ್‌ ಮುನ್ನಡೆ
ಮಹಾಘಟಬಂಧನ್‌ ಭಾರೀ ಹಿನ್ನಡೆ ಕಂಡುಕೊಂಡಿದೆ. ಕೇವಲ 98 ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಮುಂದಿದ್ದಾರೆ. ಆರ್‌ಜೆಡಿ ಗರಿಷ್ಠ 71 ಕ್ಷೇತ್ರಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿಗಳು 17 ಕಡೆಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮುನ್ನಡೆಯಲ್ಲಿ ಶತಕ ಬಾರಿಸಿದ ಎನ್‌ಡಿಎ
ಆರಂಭಿಕ ಟ್ರೆಂಡ್‌ಗಳಲ್ಲಿ ಎನ್‌ಡಿಎ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. 111 ಸ್ಥಾನಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಮುಂದಿದ್ದು, ಬಿಜೆಪಿ 58, ಜೆಡಿಯು 43 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಎನ್‌ಡಿಎಗೆ ಭರ್ಜರಿ ಆರಂಭಿಕ ಮುನ್ನಡೆ
ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಭರ್ಜರಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಎನ್‌ಡಿಎ ಒಟ್ಟಾರೆ 47 ಸ್ಥಾನಗಳಲ್ಲಿ ಮುಂದಿದ್ದರೆ, ವಿಪಕ್ಷಗಳ ಒಕ್ಕೂಟ ಮಹಾಘಟಬಂಧನ್‌ ಅಭ್ಯರ್ಥಿಗಳು 30 ಸ್ಥಾನಗಳಲ್ಲಿ ಮುನ್ನಡೆ ಕಂಡುಕೊಂಡಿದ್ದಾರೆ. ಇತರರು ನಾಲ್ಕು ಸ್ಥಾನಗಳಲ್ಲಿ ಮುಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 mins ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

7 mins ago

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

14 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

14 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

16 hours ago