ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಮಹಾರಾಷ್ಟ್ರ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಎನ್‌ಡಿಎಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಹಾರಾಷ್ಟ್ರದ ನನ್ನ ಸಹೋದರಿಯರು, ಸಹೋದರರು ಹಾಗೂ ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಮೈತ್ರಿಯು ಮಹಾರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ಜನರಿಗೆ ಭರವಸೆ ನೀಡುತ್ತೇನೆ. ಜೈ ಮಹಾರಾಷ್ಟ್ರ ಎಂದು ಟ್ವೀಟ್‌ನಲ್ಲಿ ಬರೆದು ಸಂತಸ ವ್ಯಕ್ತಪಡಿಸಿದ್ದಾರೆ.





