Mysore
26
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ನಾವು ಎನ್‌ಡಿಎ ಮೈತ್ರಿಕೂಟದ ಒಂದು ಭಾಗವಾಗಿದ್ದೇವೆ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಲೋಕಸಭಾ ಅತಂತ್ರ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ನಾವು ಎಲ್ಲರೂ ಒಟ್ಟಾಗಿ ಎನ್‌ಡಿಯ ಜತೆ ಚುನಾವಣೆ ಎದುರಿಸಿದ್ದೇವೆ. ಎನ್‌ಡಿಎ ಒಕ್ಕೂಟದ ಜತೆಗೆ ಚುನಾವಣೆ ಗೆದ್ದಿದ್ದು ಅವರ ಜೊತೆಯೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಈ ಬಾರಿಯೂ ಎನ್‌ಡಿಎ ಸರ್ಕಾರ ರಚನೆಯಲ್ಲಿ ತಮ್ಮ ಪಾಲು ಇರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.

ನಾವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಟ್ಟಾಗಿಯೇ ಇದ್ದು, ಮೂರು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡುತ್ತೇವೆ. ಮತ್ತು ಇಂದು ನಡೆಯುವ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವುದಾಗಿ ನಾಯ್ಡು ತಿಳಿಸಿದ್ದಾರೆ.

Tags:
error: Content is protected !!