ದೇಶ- ವಿದೇಶ

ನೀಟ್‌ ಪರೀಕ್ಷೆ ಅಕ್ರಮ: ತನಿಖೆಯನ್ನು ಸಿಬಿಐಗೆ ವಹಿಸಿದ ಕೇಂದ್ರ

ನವದೆಹಲಿ: ಯುಜಿ-ನೀಟ್‌ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದೆ.

ಪರೀಕ್ಷೆಯಲ್ಲಿನ ಪ್ರಕರಣದ ತನಿಖೆಯ ಭಾಗವಾಗಿ ಭ್ರಷ್ಟಚಾರ ಹಾಗೂ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದತಿಯ ಹಿನ್ನೆಲೆ ಎನ್‌ಟಿಎ ಮುಖ್ಯಸ್ಥರನ್ನು ಶನಿವಾರ(ಜೂ.22) ವಜಾಗೊಳಿಸಿತ್ತು. ಅಷ್ಟೆ ಅಲ್ಲದೇ ಇಂದು(ಜೂ.23) ನಡೆಯಬೇಕಿದ್ದ ನೀಟ್‌ ಪಿಜಿ ಪ್ರವೇಶ ಪರೀಕ್ಷೆಯನ್ನು ಸಹ ಮುಂಡೂಡಿದೆ.

ನೀಟ್‌ ಪರೀಕ್ಷೆಗೆ ಸಂಬಂಧಿಸಿದಂತೆ ಅಕ್ರಮ ಹಾಗೂ ವಂಚನೆಗಳು ನಡೆದಿರುವ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ಈಗಾಗಲೇ ಬಿಹಾರ್‌ ಹಾಗೂ ಗುಜರಾತ್‌ ರಾಜ್ಯಗಳಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಯುತ್ತಿದ್ದು, ಬಿಹಾರದ ಆರೋಪಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ತಪ್ಪೊಪ್ಪೊಕೊಂಡಿದ್ದಾರೆ. ಹೀಗಾಗಿ ಪರೀಕ್ಷೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ ಯುಜಿಸಿ-ನೀಟ್‌ ಪ್ರಕರಣದ ಸಮಗ್ರ ತನಿಖೆ ಮಾಡಲು ಸಿಬಿಐಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

5 mins ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

15 mins ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

21 mins ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

48 mins ago

ಅದ್ಧೂರಿಯಾಗಿ ಬೂದನೂರು ಉತ್ಸವ ಆಚರಣೆ : ಪಿ.ರವಿಕುಮಾರ್

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…

1 hour ago

ಬಾಲ ನಟ, ನಟಿ : ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…

1 hour ago