ನವದೆಹಲಿ: 2024 ರ ನೀಟ್ ಪರೀಕ್ಷಾ ಫಲಿತಾಂಶದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಜೂನ್ 21 ರಂದು ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪಕ್ಷದ ಎಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಸಂಘಟಿತ ಭ್ರಷ್ಟಚಾರ ನಡೆಯುತ್ತಿದೆ. ನೀಟ್ ಅಕ್ರಮಗಳಿಗೆ ಸಂಬಂಧಿಸಿ ಬಿಹಾರ, ಗುಜರಾತ್ ಮತ್ತು ಹರಿಯಾಣ ರಾಜ್ಯಗಳಿಂದ ಇದು ಸಾಬೀತಾಗಿದೆ ಎಂದು ಕೆ.ಸಿ ವೇಣುಗೋಪಾಲ್ ಹೇಳಿದರು.
ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಕಂಡುಬಂದಿರುವ ತಾಂತ್ರಿಕ ದೋಷಗಳು, ಅವ್ಯವಹಾರಗಳು ಮತ್ತು ಅನುಚಿತ ವಿಧಾನಗಳು ನೀಟ್ ಪರೀಕ್ಷೆಯ ಮೇಲೆ ಪರಿಣಾಮ ಬೀರಿವೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ನೀಟ್ ಅಕ್ರಮಗಳು ಬಹಿರಂಗಗೊಂಡಿವೆ ಎಂದು ಅವರು ಪಕ್ಷದ ವಿವಿಧ ಘಟಕಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇಂಥ ಅವ್ಯವಹಾರಗಳು ಪರೀಕ್ಷಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯನ್ನು ಕುಗ್ಗಿಸಿವೆ ಹಾಗೂ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ಒಡ್ಡಿವೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಬೃಹತ್ ಭ್ರಷ್ಟಚಾರ ಮತ್ತು ಅವ್ಯವಹಾರಗಳ ಬಗ್ಗೆ ಎನ್‌ಡಿಎ ಸರ್ಕಾರದ ಮೌನ ಮತ್ತು ನಿಷ್ಕ್ರಿಯತೆಯನ್ನು ವಿರೋಧಿಸಿ ಜೂನ್ 21 ರಂದು ರಾಜ್ಯಗಳ ರಾಜಾಧಾನಿಗಳಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸುವಂತೆ ಕಾಂಗ್ರೆಸ್ ಸಮಿತಿಗಳಿಗೆ ಮನವಿ ಮಾಡಲಾಗಿದೆ ಎಂದರು.
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…