ದೇಶ- ವಿದೇಶ

ನೀಟ್‌ ಅಕ್ರಮ: ಗುಜರಾತ್‌ ಶಾಲಾ ಮಾಲೀಕನ ಬಂಧನ

ನವದೆಹಲಿ: ನೀಟ್-ಯುಜಿ ಪರೀಕ್ಷಾ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಗುಜರಾತ್‌ನ ಗೋಧ್ರಾದಲ್ಲಿರುವ ಜಯಬಲರಾಮ್‌ ಶಾಲೆಯ ಮುಖ್ಯಸ್ಥ ದೀಕ್ಷಿತ್‌ ಪಟೇಲ್‌ ಎಂಬುವರನ್ನು ಬಂಧಿಸಿದೆ.

ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ. ದೀಕ್ಷಿತ್‌ ಪಟೇಲ್‌ ಪಂಚಮಹಲ್‌ ಜಿಲ್ಲೆಯ ಗೋಧ್ರಾ ಬಳಿ ಇರುವ ಜೈ ಬಲರಾಮ್‌ ಶಾಲೆಯ ಮಾಲೀಕರಾಗಿದ್ದಾರೆ. ಮೇ 5 ರಂದು ನಡೆದ ನೀಟ್-ಯುಜಿ ಪರೀಕ್ಷೆಗೆ ನಿಗದಿಯಾಗಿದ್ದ ಕೇಂದ್ರಗಳ ಪೈಕಿ ಜಯ ಬಲರಾಮ್‌ ಶಾಲೆಯೂ ಒಂದಾಗಿತ್ತು.

ಪಟೇಲ್‌ ಅವರನ್ನು ಅವರ ನಿವಾಸದಿಂದ ಬಂಧಿಸಲಾಯಿತು. ಆ ಬಳಿಕ ಅವರನ್ನು ಅಹಮದಾಬಾದ್‌ನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು ಎಂದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ತಿಳಿಸಿದ್ದಾರೆ.

ದೀಕ್ಷಿತ್‌ ಪಟೇಲ್‌ ಅವರು ನಿಟ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು 10 ರಿಂದ 27 ಲಕ್ಷದವರೆಗೆ ಪಡೆಯುತ್ತಿದ್ದರು ಎಂಬ ಆರೋಪ ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

4 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

16 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

17 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

17 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

17 hours ago