ನವದೆಹಲಿ: ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ಸದಸ್ಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ವಿರುದ್ಧ ಪ್ರತಿಭಟನೆ ನಡೆಸಿದರು.
ಇಂದು(ಜೂ.27) ನವದೆಹಲಿಯ ಒಖ್ಲಾದಲ್ಲಿರುವ ಎನ್‌ಟಿಎ ಕಚೇರಿಗೆ ನುಗ್ಗಿದ ಎನ್‌ಎಸ್‌ಯುಐ ಪ್ರತಿಭಟನಾಕಾರರು ಎನ್‌ಟಿಎ ಕಚೇರಿಯನ್ನು ಮುಚ್ಚಿ ಘೋಷಣೆಗಳನ್ನು ಕೂಗಿದ್ದಾರೆ. ಇನ್ನೂ ಈ ಕುರಿತು ಎನ್‌ಟಿಎ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ದೇಶದಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವೈಧ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನೀಟ್-ಯುಜಿ ಹಾಗೂ ಜೆಆರ್‌ಎಫ್, ಪ್ರಾಧ್ಯಾಪಕರ ಆಯ್ಕೆಯೆ ಯುಜಿಸಿ-ನೆಟ್ ಪರೀಕ್ಷೆಯನ್ನು ಎನ್‌ಟಿಎ ಸಂಸ್ಥೆ ನಡೆಸುತ್ತದೆ.
ಮೇ 5ರಂದು ನಡೆದ ಯುಜಿ-ನೀಟ್ ಹಾಗೂ ಜೂನ್ 18 ರಂದು ನಡೆದು ಯುಜಿಸಿ-ನೆಟ್‌ಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಇವೆ. ಈ ಸಂಬಂಧ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಪ್ರಕರಣವನ್ನು ಸಿಬಿಐಗೆ ವಹಿಸಿದ ಕೇಂದ್ರ, ಮರುದಿನವೇ ಮೊದಲ ದೂರು ದಾಖಲಿಸಿಕೊಂಡು ತನಿಖೆ ನಡೆಸಿ, ಇಂದು ಬಿಹಾರದ ಪಾಟ್ನಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…