ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿವೆ.
ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು 2026ರ ಜೂನ್ 21, ಭಾನುವಾರದಂದು ನಿಗದಿಪಡಿಸಲಾಗಿದೆ. ಅಧಿಕೃತ ಚಾನಲ್‌ಗಳ ಮೂಲಕವೇ ಅಭ್ಯರ್ಥಿಗಳು ಹಾಗೂ ಪೋಷಕರು ಮಾಹಿತಿ ಪಡೆದುಕೊಳ್ಳಬೇಕು ಎಂದು ವಿನಂತಿಸಿದೆ.
ಏನಿದು ಪ್ರಕರಣ?
ಮೇ 3ರಂದು ದೇಶಾದ್ಯಂತ ನಡೆದ ನೀಟ್-ಯುಜಿ 2026 ಪರೀಕ್ಷೆಗೂ ಮುನ್ನ ‘ಗೆಸ್ ಪೇಪರ್’ ಹೆಸರಿನಲ್ಲಿ ಕೆಲವು ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಬಳಿಕ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿತ್ತು. ಜೀವಶಾಸ್ತ್ರದ 90 ಹಾಗೂ ರಸಾಯನಶಾಸ್ತ್ರದ 30 ಪ್ರಶ್ನೆಗಳು ಮೂಲ ಪ್ರಶ್ನೆಪತ್ರಿಕೆಯೊಂದಿಗೆ ಹೊಂದಿಕೆಯಾಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ. ರಾಜಸ್ಥಾನ ಎಸ್‌ಒಜಿ ಮತ್ತು ಸಿಬಿಐ ಈಗ ಪ್ರಕರಣದ ತನಿಖೆ ನಡೆಸುತ್ತಿವೆ. ಈ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗಳು ನಡೆದಿದ್ದವು.
ವಿದ್ಯಾರ್ಥಿಗಳ ಆಕ್ರೋಶ
‘2 ವರ್ಷ ತಯಾರಿ ನಡೆಸಿ ಪರೀಕ್ಷೆ ಬರೆದಿದ್ದೇವೆ. ಪ್ರಶ್ನೆಪತ್ರಿಕೆ ಸೋರಿಕೆಗೆ ನಾವೇನು ಮಾಡಿದೆವು? ಮತ್ತೆ ಪರೀಕ್ಷೆ ಬರೆಯುವುದು ಅನ್ಯಾಯ’ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋರಿಕೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕೌನ್ಸೆಲಿಂಗ್ ವಿಳಂಬ
ಮರು ಪರೀಕ್ಷೆ ಜೂನ್‌ನಲ್ಲಿ ನಡೆದರೆ, ಫಲಿತಾಂಶ ಜುಲೈ ಮಧ್ಯಭಾಗದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಇದರಿಂದ ವೈದ್ಯಕೀಯ ಕೋರ್ಸ್‌ಗಳ ಕೌನ್ಸೆಲಿಂಗ್ ಆಗಸ್ಟ್‌ನಲ್ಲಿ ಆರಂಭವಾಗಿ, ಶೈಕ್ಷಣಿಕ ವರ್ಷ ಸುಮಾರು 2 ತಿಂಗಳು ವಿಳಂಬವಾಗಲಿದೆ ಎಂದು ಶಿಕ್ಷಣ ತಜ್ಞರು ಹೇಳಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…