ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು ಇನ್ನೊಂದು ವಾರದೊಳಗೆ ಘೋಷಿಸುವುದಾಗಿ ನ್ಯಾಷನಲ್ ಟೆಸ್ಟ್ ಎಜೆನ್ಸಿ(ಎನ್‍ಟಿಎ) ಹೇಳಿದೆ.
ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‍ಟಿಎ ತಿಳಿಸಿದೆ. ಮತ್ತೊಂದೆಡೆ ನೀಟ್ ಮರು ಪರೀಕ್ಷೆ ಯಾವಾಗ ಎನ್ನುವ ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಇನ್ನು 7 ರಿಂದ 10 ದಿನಗಳಲ್ಲಿ ನೀಟ್ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಎನ್‍ಟಿಎ ಡೈರೆಕ್ಟರ್ ಜನರಲ್ ಅಭಿಷೇಕ್ ಸಿಂಗ್ ಹೇಳಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ನೀಟ್ ಮರು ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಆಗಲಿದ್ದು, ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಕಳೆದ ಮೇ 3, 2026ರಂದು ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು.
ಪ್ರಶ್ನೆ ಪತ್ರಿಕೆ ಲೀಕ್ ಹಿಂದೆ ಕೋಚಿಂಗ್ ಸೆಂಟರ್‌ಗಳ ಕೈವಾಡವಿದೆ ಎನ್ನುವ ಆರೋಪ ಕೇಳಿ ಬಂದಿದೆ. ಎಷ್ಟು ರಾಜ್ಯಗಳಲ್ಲಿ ಲೀಕ್ ಜಾಲ ಹಬ್ಬಿದೆ ಎನ್ನುವುದರ ಬಗ್ಗೆ ಎನ್‍ಟಿಎ ಯಾವುದೇ ಮಾಹಿತಿ ನೀಡಿಲ್ಲ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…