ದೇಶ- ವಿದೇಶ

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ದೇಶದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2ರಿಂದ ಆರಂಭವಾಗಿ ಸಂಜೆ 5 ಗಂಟೆ 15 ನಿಮಿಷದವರೆಗೆ ಮರುಪರೀಕ್ಷೆ ನಡೆಯಿತು. ಅಂಗವಿಕಲ ಅಭ್ಯರ್ಥಿಗಳಿಗೆ ಸಂಜೆ 6.20 ರವರೆಗೆ ಪರೀಕ್ಷೆ ಬರೆಯಲು ಅವಕಾಶವಿತ್ತು. ಇಂಗ್ಲಿಷ್ ಸೇರಿದಂತೆ 12 ಭಾರತೀಯ ಭಾಷೆಗಳಲ್ಲಿ ಪರೀಕ್ಷೆ ನಡೆಯಿತು.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಪಾರದರ್ಶಕವಾಗಿರುವ ನೀರಿನ ಬಾಟಲಿ, ಮಧುಮೇಹ ಸಮಸ್ಯೆ ಇರುವ ಅಭ್ಯರ್ಥಿಗಳು ಮಧುಮೇಹ ಮಾತ್ರೆಗಳು, ಬಾಳೆಹಣ್ಣು, ಸೇಬು ಮತ್ತು ಕಿತ್ತಳೆ ಮುಂತಾದ ಹಣ್ಣುಗಳನ್ನು ಕೊಂಡೊಯ್ಯಲು ಅವಕಾಶ ನೀಡಲಾಗಿತ್ತು. ಒಟ್ಟು 95,000 ಪರೀಕ್ಷಾ ಕೊಠಡಿಗಳಲ್ಲಿ ಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಒಟ್ಟಾರೆ 1,38,560 ಸಿಸಿಟಿವಿ ಕ್ಯಾಮೆರಾಗಳ ಮೂಲಕ ನೇರ ಕಣ್ಗಾವಲು ಇರಿಸಿದ್ದ ಎನ್ಟಿಎ, ನಕಲು ತಡೆಗಟ್ಟಲು 51,311ಜ್ಯಾಮರ್ಗಳನ್ನು ಹಾಕಿತ್ತು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ 40 ರಿಂದ 50 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪರೀಕ್ಷೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ, ಪೊಲೀಸ್, ಅರೆಸೇನಾ ಪಡೆ, ಭಾರತೀಯ ವಾಯುಪಡೆ ಹಾಗೂ ಅಂಚೆ ಇಲಾಖೆಯ ಸಹಯೋಗವನ್ನು ಪಡೆಯಲಾಗಿತ್ತು ಎಂದು ಎನ್ಟಿಎ ತಿಳಿಸಿದೆ.

ಕಳೆದ ಮೇ 3ರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಒತ್ತಾಯ ಕೇಳಿಬಂದಿತ್ತು. ತದನಂತರ ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ಕೇಂದ್ರ ಸರ್ಕಾರ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿತ್ತು.

 

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

43 mins ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

4 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

4 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

5 hours ago