Ashburn
68
clear sky
Light
Dark

ನೀಟ್-ಯುಜಿ ಪರೀಕ್ಷೆಯ ರೀಟೆಸ್ಟ್‌ ಬಗ್ಗೆ ಸುಪ್ರೀಂಕೋರ್ಟ್‌ ಆದೇಶ ಏನ್‌ ಗೊತ್ತಾ.?

ನವದೆಹಲಿ: ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್‌ನಲ್ಲಿಂದು ಮುಖ್ಯವಾಗಿ ನೀಟ್-ಯುಜಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಕೂಲಂಕುಶವಾಗಿ ವಿಚಾರಣೆ ನಡೆಸೋಣ ಎಂದರು.

ಅಕ್ರಮ ಸಂಬಂಧ 400 ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಆದೇಶ ಹೊರಡಿಸಿದೆ.