Mysore
24
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ನೀಟ್‌-ಯುಜಿ ಅಕ್ರಮ: ಪಾಟ್ನಾದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

ನವದೆಹಲಿ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳ ತಂಡ ಗುರುವಾರ(ಜೂ.27) ಬಿಹಾರದ ಪಾಟ್ನದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ನೀಟ್‌ ಪ್ರಕರಣದ ಮೊದಲ ಬಂಧನ ಇದಾಗಿದೆ.

ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ಕೂಡ ವ್ಯವಸ್ಥೆ ಮಾಡಿಕೊಟ್ಟ ಆರೋಪದ ಮೇರೆಗೆ ಪಾಟ್ನಾದ ಮನೀಶ್‌ ಕುಮಾರ್‌ ಮತ್ತು ಅಶುತೋಷ್‌ ಕುಮಾರ್‌ ಎಂಬುವವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಸಿಬಿಐ 6 ಎಫ್‌ಐಆರ್‌ಗಳನ್ನು ದಾಖಲಿಸಿದೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಎನ್‌ಟಿಎ ಸಂಸ್ಥೆಯು ನೀಟ್‌-ಯುಜಿ ಪರೀಕ್ಷೆಗಳನ್ನು ನಡೆಸುತ್ತ ಬಂದಿದೆ. ಈ ವರ್ಷ ಮೇ 5 ರಂದು ವಿದೇಶದ 14 ಪರೀಕ್ಷಾ ಕೇಂದ್ರಗಳು ಸೇರಿ 571 ನಗರಗಳ 4750 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ 23 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಿದ್ದರು.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ನೀಟ್‌ ಅಕ್ರಮವನ್ನು ಸಿಬಿಐಗೆ ವಹಿಸಿತ್ತು. ಆ ಬೆನ್ನಲ್ಲೇ ಭಾನುವಾರ(ಜೂ.23) ಮೊದಲ ಎಫ್‌ಐಆರ್‌ ದಾಖಲಾಗಿತ್ತು.

Tags:
error: Content is protected !!