Mysore
21
heavy intensity rain

Social Media

ಗುರುವಾರ, 15 ಅಕ್ಟೋಬರ್ 2026
Light
Dark

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳು, ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಳಗಾಗಿವೆ. ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿರುವ ಪರಿಣಾಮ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ.

ಇದರ ನಡುವೆ ವಿದೇಶಿಯರು ಸೇರಿದಂತೆ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಆತಂಕ ಮತ್ತಷ್ಟು ಹೆಚ್ಚಾಗಿದೆ. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರವಾಹದ ನೀರು ಹಾಗೂ ಕೆಸರಿನ ನಡುವೆ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ತಂಡಗಳು ಹರಸಾಹಸ ಪಡುತ್ತಿವೆ.

ಅನೇಕ ಪ್ರದೇಶಗಳಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಪರಿಹಾರ ಮತ್ತು ವೈದ್ಯಕೀಯ ನೆರವು ಒದಗಿಸುವ ಕಾರ್ಯವೂ ಮುಂದುವರಿದಿದೆ. ನಾಪತ್ತೆಯಾದವರ ಸಂಖ್ಯೆ ಹೆಚ್ಚಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕವೂ ಎದುರಾಗಿದೆ. ನೇಪಾಳದ ಹಲವು ಭಾಗಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಮುಂದುವರಿದಿದೆ.

Tags:
error: Content is protected !!