Mysore
24
scattered clouds

Social Media

ಶನಿವಾರ, 23 ಮೇ 2026
Light
Dark

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27) ಅಧಿಕಾರ ಸ್ವೀಕರಿಸಿದ್ದಾರೆ.

ಗುರುವಾರ ಬಾಲೇಂದ್ರ ಶಾ ಅವರನ್ನು ರಾಷ್ಟ್ರೀಯ ಸ್ವತಂತ್ರ ಪಕ್ಷವು ತನ್ನ ಸಂಸದೀಯ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಪಕ್ಷದ ಅಧ್ಯಕ್ಷೆ ರಬಿ ಲಮಿಚಾನೆ ಅವರು ಈ ಹುದ್ದೆಗೆ ಶಾ ಅವರ ಹೆಸರನ್ನು ಪ್ರಸ್ತಾಪಿಸಿದಾಗ ಸರ್ವಾನುಮತದ ಅನುಮೋದನೆ ದೊರಕಿತ್ತು.

ಇತ್ತೀಚೆಗೆ ನೇಪಾಳದ ಸಾರ್ವತ್ರಿಕ ಚುನಾವಣೆಯಲ್ಲಿ ಆರ್‌ ಎಸ್‌ ಪಿ ಪಕ್ಷವು ಒಟ್ಟು 275 ಸ್ಥಾನಗಳಲ್ಲಿ 182ರಲ್ಲಿ ಭರ್ಜರಿ ಗೆಲುವು ಸಾಧಿಸಿ ಬಹುಮತ ಪಡೆದಿತ್ತು. ನೇಪಾಳದಲ್ಲಿ ಈ ಹಿಂದಿನ ಸರ್ಕಾರಗಳ ಭ್ರಷ್ಟಾಚಾರವನ್ನು ವಿರೋಧಿಸಿ ಜೆನ್‌ಝೀ ಹೋರಾಟ ನಡೆಸಿತ್ತು.

ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ನಾಲ್ಕು ಬಾರಿ ಪ್ರಧಾನಿಯಾಗಿದ್ದ ಕೆಪಿ ಶರ್ಮಾ ಒಲಿ ಅವರನ್ನು ಪರಾಜಯಗೊಳಿಸಿ ಗೆಲುವು ಸಾಧಿಸಿದ್ದರು. ನೇಪಾಳ ಚುನಾವಣೆಯಲ್ಲಿ ಆರ್‌ ಎಸ್‌ ಪಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿತ್ತು.

Tags:
error: Content is protected !!