ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27) ಅಧಿಕಾರ ಸ್ವೀಕರಿಸಿದ್ದಾರೆ.
ಗುರುವಾರ ಬಾಲೇಂದ್ರ ಶಾ ಅವರನ್ನು ರಾಷ್ಟ್ರೀಯ ಸ್ವತಂತ್ರ ಪಕ್ಷವು ತನ್ನ ಸಂಸದೀಯ ಪಕ್ಷದ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಪಕ್ಷದ ಅಧ್ಯಕ್ಷೆ ರಬಿ ಲಮಿಚಾನೆ ಅವರು ಈ ಹುದ್ದೆಗೆ ಶಾ ಅವರ ಹೆಸರನ್ನು ಪ್ರಸ್ತಾಪಿಸಿದಾಗ ಸರ್ವಾನುಮತದ ಅನುಮೋದನೆ ದೊರಕಿತ್ತು.
ಇತ್ತೀಚೆಗೆ ನೇಪಾಳದ ಸಾರ್ವತ್ರಿಕ ಚುನಾವಣೆಯಲ್ಲಿ ಆರ್ ಎಸ್ ಪಿ ಪಕ್ಷವು ಒಟ್ಟು 275 ಸ್ಥಾನಗಳಲ್ಲಿ 182ರಲ್ಲಿ ಭರ್ಜರಿ ಗೆಲುವು ಸಾಧಿಸಿ ಬಹುಮತ ಪಡೆದಿತ್ತು. ನೇಪಾಳದಲ್ಲಿ ಈ ಹಿಂದಿನ ಸರ್ಕಾರಗಳ ಭ್ರಷ್ಟಾಚಾರವನ್ನು ವಿರೋಧಿಸಿ ಜೆನ್‌ಝೀ ಹೋರಾಟ ನಡೆಸಿತ್ತು.
ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ನಾಲ್ಕು ಬಾರಿ ಪ್ರಧಾನಿಯಾಗಿದ್ದ ಕೆಪಿ ಶರ್ಮಾ ಒಲಿ ಅವರನ್ನು ಪರಾಜಯಗೊಳಿಸಿ ಗೆಲುವು ಸಾಧಿಸಿದ್ದರು. ನೇಪಾಳ ಚುನಾವಣೆಯಲ್ಲಿ ಆರ್ ಎಸ್ ಪಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿತ್ತು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…