ಕಠ್ಮಂಡು : ರಾಜಕೀಯ ಆಸ್ಥಿರತೆಗೆ ಕಾರಣವಾಗಿದ್ದ ಭಾರತದ ನೆರೆಯ ರಾಷ್ಟ್ರ ನೇಪಾಳ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದೀಗ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ.
ಜೆನ್ ಝೀ ಪ್ರತಿಭಟನೆ ಹಿಂಸಾರೂಪ ಪಡೆದು ಪ್ರಧಾನಿ ರಾಜೀನಾಮೆ, ಹಲವು ಸಾವು ನೋವು ಸಂಭವಿಸಿ ಪ್ರಕ್ಷುಬ್ದ ಸ್ಥಿತಿಗೆ ತಿರುಗಿದ್ದ ನೇಪಾಳದಲ್ಲಿ ಶಾಂತಿ ನಿಧಾನವಾಗಿ ಮರಳುತ್ತಿದೆ.
ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ರಾತ್ರಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಬೆಳಿಗ್ಗೆ ೫ ಗಂಟೆಯಿಂದ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಮಧ್ಯಂತರ ಸರ್ಕಾರ ರಚನೆಯಾದ ನಂತರ, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪಡೆಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆದರೆ, ನೇಪಾಳದ ಬೀದಿಗಳಲ್ಲಿ ಸೈನ್ಯದ ಉಪಸ್ಥಿತಿಯು ಇನ್ನೂ ಕೆಲವು ದಿನಗಳವರೆಗೆ ಉಳಿಯುವ ನಿರೀಕ್ಷೆಯಿದೆ.
ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾದ ನಂತರ, ನೇಪಾಳದ ಜನರು ಭ್ರಷ್ಟಾಚಾರ ಮುಕ್ತ ಆಡಳಿತದ ನಿರೀಕ್ಷೆ ಮಾತ್ರವಲ್ಲದೇ, ಈ ಹಿಂದೆ ಭ್ರಷ್ಟಾಚಾರ ಆರೋಪಗಳಲ್ಲಿ ಭಾಗಿಯಾಗಿರುವ ಮಾಜಿ ಪ್ರಧಾನಿ ಸೇರಿದಂತೆ ಎಲ್ಲಾ ಸಚಿವರ ಆಸ್ತಿಯನ್ನು ತನಿಖೆ ಮಾಡುವುದರ ಜೊತೆಗೆ ನೇಪಾಳವನ್ನು ಭ್ರಷ್ಟಾಚಾರ ಮುಕ್ತವನ್ನಾಗಿಸುವ ಭರವಸೆಯಲ್ಲಿದ್ದಾರೆ.
ನೇಪಾಳ ಸಹಜ ಸ್ಥಿತಿಗೆ ; ಕರ್ಫ್ಯೂ ತೆರವು
ನೇಪಾಳದಲ್ಲಿ ಜೆನ್ ಝೀ ಯುವ ಜನರು ನಡೆಸಿದ ಪ್ರತಿಭಟನೆಗಳ ಹಿಂಸಾಚಾರದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ೫೧ಕ್ಕೆ ಏರಿಕೆಯಾಗಿದೆ. ಇದರಲ್ಲಿ ೨೧ ಪ್ರತಿಭಟನಾಕಾರರು, ೯ ಖೈದಿಗಳು, ೩ ಪೊಲೀಸರು ಮತ್ತು ೧೮ ಇತರ ಜನರು ಸೇರಿದ್ದಾರೆ. ಇನ್ನೊಂದು ಮುಖ್ಯ ಸಂಗತಿ ಅಂದರೆ, ಈ ಹಿಂಸಾಚಾರದಿಂದಾಗಿ ನೇಪಾಳದ ಹೋಟೆಲ್ ಉದ್ಯಮದ ಮೇಲೆ ಅತಿ ದೊಡ್ಡ ಪರಿಣಾಮ ಬೀರಿದ್ದು, ವರದಿಗಳ ಪ್ರಕಾರ, ನೂರಾರು ಹೋಟೆಲ್‌ಗಳಲ್ಲಿ ನಡೆದ ವಿಧ್ವಂಸಕ ಕೃತ್ಯ, ಲೂಟಿ ಮತ್ತು ಬೆಂಕಿ ಹಚ್ಚುವಿಕೆ ಘಟನೆಗಳಿಂದಾಗಿ ಹೋಟೆಲ್ ಉದ್ಯಮವು ಸುಮಾರು ೨,೫೦೦ ಕೋಟಿ ರೂಪಾಯಿಗಳಿಗೂ ಹೆಚ್ಚು ನಷ್ಟವನ್ನು ಅನುಭವಿಸಿದೆ ಎಂದು ತಿಳಿದು ಬಂದಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…