ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು ಕಣ್ಮರೆಯಾಗಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಭೀಕರ ಪ್ರವಾಹದಿಂದ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರು ಕಂಗಾಲಾಗಿದ್ದಾರೆ.
ನೇಪಾಳದಲ್ಲಿ ಆರನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.




