ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್ ಹೇಳಿಕೆಯನ್ನು ಇಸ್ರೇಲ್ ಕಚೇರಿ ಅಲ್ಲೆಗಳಿದಿದೆ.
ಇಸ್ರೇಲ್ ದಾಳಿ ಬೆನ್ನಲ್ಲೇ ಇರಾನ್ ಸಹ ದಾಳಿಯನ್ನು ಮುಂದುವರೆಸಿದೆ. ಏತನ್ಮಧ್ಯೆ, ನೆತನ್ಯಾಹು ಹತ್ಯೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯವೊಂದು ಹರಿದಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಕಚೇರಿ, ಇದೆಲ್ಲ ಸುಳ್ಳು ಸುದ್ದಿ, ಪ್ರಧಾನಿ ನೆತನ್ಯಾಹು ಅವರು ಕ್ಷೇಮವಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಸಂಘರ್ಷ ಕುರಿತು ನೆತನ್ಯಾಹು ವಿಡಿಯೊಂದನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗಿತ್ತು. ವಿಡಿಯೋ ಆರಂಭಧಲ್ಲಿ ನೆತನ್ಯಾಹು ಅವರ ಬಲಗೈಯಲ್ಲಿ ಆರು ಬೆರಳು ಕಾಣುತ್ತಿವೆ ಎಂದು ಕೆಲವರು ಪೋಸ್ಟ್ ಮಾಡಿದರೆ, ಇದು ಎಐ ಮೂಲಕ ಸೃಜಿಸಿರಬಹುದಾದ ವಿಡಿಯೊ ಎಂದು ಇನ್ನಷ್ಟು ಮಂದಿ ಅಭಿಪ್ರಾಯಪಟ್ಟಿದ್ದರು.
ಸಾಕಷ್ಟು ನೆಟ್ಟಿಗರು ನೆತನ್ಯಾಹು ವಿಡಿಯೊದಲ್ಲಿ ಇಸ್ರೇಲ್ ಧ್ವಜಗಳು ಸ್ಥಿರವಾಗಿದೆ. ಪರದೆ ಗಾಳಿಗೆ ಅಲುಗಾಡುತ್ತಿದೆ. ಇದು ಎಐ ಸುಳ್ಳು ಸುದ್ದಿ ಎಂದಿದ್ದಾರೆ. ಆದಾಗ್ಯೂ ಹಲವರು ಖಮೇನಿ ಹತ್ಯೆಗೆ ಪ್ರತೀಕಾರವಾಗಿ ನೆತನ್ಯಾಹು ಅನ್ನು ಹತ್ಯೆ ಮಾಡಲಾಗಿದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಹೀಗಾಗಿ ನೇತನ್ಯಾಹು ಸಾವಿನ ವದಂತಿ ಹರಿದಾಡುತ್ತಿದೆ.
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…