ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ.
ಹೌದು, ವಿಧಾನಸಭೆ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆ ಕಸರತ್ತು ಶುರುವಾಗಿದೆ. ಅದಕ್ಕೆ ಪೂರಕವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸದಿಂದ ವಾಪಸ್ ಆದ ಬೆನ್ನಲ್ಲೇ ಸಿಎಂ ಸೇರಿದಂತೆ ಇತರೆ ಸಚಿವ ಸಂಪುಟ ರಚನೆ ಬಗ್ಗೆ ಸಭೆ ನಡೆದಿದೆ.
ಇನ್ನು ಪಕ್ಷದ ಶಾಸಕಾಂಗ ಸಭೆಯ ಬಳಿಕ ಫೆಬ್ರವರಿ.19ರಂದು ದೆಹಲಿ ಸಿಎಂ ಯಾರೆಂದು ಘೋಷಿಸುವ ಸಾಧ್ಯತೆಯಿದ್ದು, ಫೆಬ್ರವರಿ.20 ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಅಂದೇ ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…