Mysore
20
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

Over 5.5 Crore Devotees Have Visited Ayodhya Ram Temple So Far

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ ಅನುಗುಣವಾಗಿ ಈ ಉಡುಪನನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಧಾರ್ಮಿಕ ಸಮಿತಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೇವಾಲಯ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯ ಮಿಥಿಲೇಶ್‌ ನಂದಿನಿ ಶರಣ್‌, ರಾಮನಂದಿ ಸಂಪ್ರದಾಯಕ್ಕೆ ಅನುಗುಣವಾಗಿ ಉಡುಪುಗಳನ್ನು ಸೂಚಿಸಲಾಗಿದೆ.

ಅರ್ಚಕರು ತಿಳಿ-ಹಳದಿ ರೇಷ್ಮೆ ಧೋತಿಗಳು ಮತ್ತು ಅದಕ್ಕೆ ಹೊಂದಿಕೆಯಾಗುವ ರೇಷ್ಮೆ ಉತ್ತರೀಯಗಳನ್ನು ಧರಿಸುತ್ತಾರೆ. ತಿಳಿ ಹಳದಿ ಬಣ್ಣವನ್ನು ಭಗವಾನ್‌ ರಾಮನಿಗೆ ಪ್ರಿಯವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ವಸ್ತ್ರ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!