Droupadi Murmu
ಹೊಸದಿಲ್ಲಿ : ಹರಿಯಾಣ ಮತ್ತು ಗೋವಾಕ್ಕೆ ಹೊಸ ರಾಜ್ಯಪಾಲರನ್ನು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಆದೇಶ ಹೊರಡಿಸಿದ್ದಾರೆ.
ಪುಸಪತಿ ಅಶೋಕ್ ಗಜಪತಿ ರಾಜು ಗೋವಾ ರಾಜ್ಯಪಾಲರಾಗಿ ನೇಮಿಸಲಾಗಿದ್ದು, ಪ್ರೊ. ಆಶಿಮ್ ಕುಮಾರ್ ಘೋಷ್ ಅವರನ್ನು ಹರಿಯಾಣ ರಾಜ್ಯಪಾಲರಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆಯಲ್ಲಿ ತಿಳಿಸಿದೆ.
ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಬ್ರಿಗೇಡಿಯರ್ ಬಿಡಿ ಮಿಶ್ರಾ (ನಿವೃತ್ತ) ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ ಅವರನ್ನು ಲಡಾಖ್‌ನ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಎಲ್ಲಾ ನೇಮಕಾತಿಗಳು ನೇಮಕಗೊಂಡವರು ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ.
ಪುಸಪತಿ ಅಶೋಕ್ ಗಜಪತಿ ರಾಜು: ಆಂಧ್ರಪ್ರದೇಶದ ವಿಜಯನಗರದ ರಾಜಮನೆತನದ ಪುಸಪತಿ ಕುಟುಂಬದಲ್ಲಿ ಜನಿಸಿದ ಪುಸಪತಿ ಅಶೋಕ್ ಗಜಪತಿ ರಾಜು ತೆಲುಗು ದೇಶಂ ಪಕ್ಷದ ಹಿರಿಯ ನಾಯಕ. ಏಳು ಬಾರಿ ಶಾಸಕರಾಗಿರುವ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅಧಿಕಾರ ನಡೆಸಿದ ಅನುಭವ ಇದೆ.
2014 ರಲ್ಲಿ ವಿಜಯನಗರಂ ಲೋಕಸಭಾ ಸ್ಥಾನವನ್ನು ಗೆದ್ದ ನಂತರ, ರಾಜು ಮೊದಲ ಮೋದಿ ಸಂಪುಟದಲ್ಲಿ ಸುಮಾರು ನಾಲ್ಕು ವರ್ಷಗಳ ಕಾಲ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಆಂಧ್ರಪ್ರದೇಶದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಅವರು ಅಂತಿಮವಾಗಿ ರಾಜೀನಾಮೆ ನೀಡಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…