Mysore
24
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವರಾದ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ ಹಾಗೂ ರಾಜ್ಯದ ಇನ್ನೂ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದರು.

ಈಗಾಗಲೇ ರಾಜ್ಯಕ್ಕೆ ಹೈ ಸ್ಪೀಡ್ ರೈಲು ಕಾರಿಡಾರ್ ಗಳನ್ನು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಅದಕ್ಕೆ ಹೆಚ್ಚುವರಿಯಾಗಿ ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ನೀಡಲಾಗಿದೆ. ಈ ಮಾರ್ಗವು ಹುಬ್ಬಳ್ಳಿ, ಬೆಳಗಾವಿ ಮೂಲಕ ಹಾದು ಹೋಗಲಿದೆ ಎಂಬುದಾಗಿ ರೈಲ್ವೆ ಸಚಿವರು ತಮಗೆ ತಿಳಿಸಿದರು ಎಂದು ಸಚಿವರು ಕುಮಾರಸ್ವಾಮಿ ಅವರು ಹೇಳಿದರು.

ಅಲ್ಲದೆ, ಬೆಂಗಳೂರು-ಮುಂಬಯಿಗೆ ಹೊಸ ರೈಲು ಆರಂಭಿಸಲಾಗುವುದು ಎನ್ನುವ ಮಾಹಿತಿಯನ್ನು ರೈಲ್ವೆ ಸಚಿವರು ತಮಗೆ ನೀಡಿದರು. ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು-ಮುಂಬಯಿ ನಡುವಿನ ಹೊಸ ರೈಲಿನಿಂದ ಕರ್ನಾಟಕಕ್ಕೆ ಮತ್ತಷ್ಟು ಅನುಕೂಲ ಆಗಲಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಹೊಸ ರೈಲು ಸಂಪರ್ಕ ಮತ್ತು ಹಾಲಿ ರೈಲು ಮಾರ್ಗಗಳಲ್ಲಿ ವನ್ಯಜೀವಿಗಳ ಅಪಘಾತಗಳನ್ನು ತಡೆಗಟ್ಟಲು ರೈಲ್ವೆ ಬೇಲಿ ಮತ್ತು ಬ್ಲಾಕ್ ಕಾರಿಡಾರ್‌ಗಳ ಅನುಷ್ಠಾನದ ಕುರಿತು ವಿವರವಾದ ಮಾತುಕತೆ ನಡೆಸಲಾಯಿತು ಎಂದು ಸಚಿವರು ಹೇಳಿದರು.

ಮಂಡ್ಯದಲ್ಲಿ ರೈಲ್ವೆ ಮೂಲಸೌಕರ್ಯದ ಬಗ್ಗೆ ಚರ್ಚೆ:
ಮಂಡ್ಯ ಲೋಕಸಭೆ ಕ್ಷೇತ್ರವೂ ಸೇರಿದಂತೆ ಕರ್ನಾಟಕದ ಎಲ್ಲಾ ಬಾಕಿ ಇರುವ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು ಮತ್ತು ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್‌ ರಾಮನಗರದಲ್ಲಿ ನಿಲುಗಡೆಯನ್ನು ಕೋರಿ ಮನವಿ ಮಾಡಲಾಯಿತು.

ಅಲ್ಲದೆ, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಮಂಡ್ಯ ಜಿಲ್ಲೆಯಲ್ಲಿ ಸುಧಾರಿತ ಆಧಾರ್ ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ ಕೂಡ ರೈಲ್ವೆ ಸಚಿವರಿಗೆ ಮನವರಿಕೆ ಮಾಡಲಾಯಿತು.

ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಸಾರ್ವಜನಿಕ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ನಡೆಸಿದ ಫ್ರಲಪ್ರದವಾಗಿತ್ತು ಎಂದು ಅವರು ಹೇಳಿದರು.

ತಮ್ಮ ಮನವಿಗಳ ಬಗ್ಗೆ ಕೇಂದ್ರ ರೈಲ್ವೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಅವರು ಉಪಸ್ಥಿತರಿದರು.

Tags:
error: Content is protected !!