ದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ಹೊಸ ಮಾರ್ಗಸೂಚಿಗಳನ್ನು ದೆಹಲಿ ಪೊಲೀಸರು ಪ್ರಕಟಿಸಿರುವುದಾಗಿ ವರದಿಯಾಗಿದೆ.
ಇದರ ಪ್ರಕಾರ, ಕಾರ್ಯಕ್ರಮಗಳನ್ನು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ನಡೆಸಲು ಅವಕಾಶವಿದೆ. ಗರಿಷ್ಠ 50 ಸಾವಿರ ಜನರು ಭಾಗವಹಿಸಬಹುದಾಗಿದೆ.
ಸಾರ್ವಜನಿಕರ ಸುರಕ್ಷತೆ, ಭದ್ರತೆ ಹಾಗೂ ಸುಗಮ ನಿರ್ವಹಣೆಗಾಗಿ ಈ ನಿಯಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಲಾಗಿದೆ.
ಇತ್ತೀಚೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಇದೇ ಮೈದಾನದಲ್ಲಿ ಬೃಹತ್ ರ‍್ಯಾಲಿ ನಡೆಸಿತ್ತು. ಅದರ ಬೆನ್ನಲ್ಲೇ ಹೊಸ ಮಾರ್ಗಸೂಚಿಗಳ ಕುರಿತು ವರದಿ ಹೊರಬಿದ್ದಿದೆ.




