ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಚರ್ಚೆ ಮಾಡುತ್ತಿದೆ. ಆದ್ದರಿಂದ ಟೋಲ್ ಸಂಗ್ರಹ ಅಗತ್ಯವಾಗಿದೆ. ದೇಶದಲ್ಲಿ ಉತ್ತಮ ರಸ್ತೆ ಬೇಕಾದರೆ, ನೀವು ಅದಕ್ಕೆ ಹಣ ಪಾವತಿಸಬೇಕು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ಬಹಳಷ್ಟು ದೊಡ್ಡ ರಸ್ತೆಗಳು, ನಾಲ್ಕು ಪಥಗಳು, ಆರು ಪಥಗಳನ್ನು ನಿರ್ಮಿಸುತ್ತಿದ್ದೇವೆ. ಬ್ರಹ್ಮಪುತ್ರ ನದಿಗೆ ಸೇತುವೆಗಳನ್ನು ನಿರ್ಮಿಸುತ್ತಿದ್ದೇವೆ. ಆದ್ದರಿಂದ ಟೋಲ್ ಇಲ್ಲದೇ ರಸ್ತೆ ನಿರ್ಮಾಣ ಸಾಧ್ಯವಿಲ್ಲ ಎಂದರು.





