ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು ಅದನ್ನು ಪಾಲಿಸಲು ಸಿದ್ಧನಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಾಧ್ಯಕ್ಷ ಹುದ್ದೆ ಆಯ್ಕೆ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಹುದ್ದೆಯ ಆಸೆಯಿಲ್ಲ. ನನಗಿಂತ ಹಿರಿಯರಿದ್ದಾರೆ. ತಂದೆಯವರಾದ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಾನು ಪಕ್ಷ ಸಂಘಟನೆ ಕಾರ್ಯ ಮಾಡುತ್ತೇನೆ. ಪಕ್ಷಕ್ಕೆ ಸಾವಿರ ಕಾರ್ಯಕರ್ತರನ್ನು ಹುಟ್ಟುಹಾಕುವ ಶಕ್ತಿ ಇದೆ. ಹೀಗಾಗಿ ಪಕ್ಷದ ತೀರ್ಮಾನವೇ ಅಂತಿಮ ಎಂದರು.
ಉಪಚುನಾವಣೆ ಸೋಲಿನಿಂದ ನಾನು ಹತಾಶನಾಗಿಲ್ಲ. ಈಗಲೂ ನಾನು ಪ್ರತಿನಿಧಿಸಿದ ಕ್ಷೇತ್ರದ ರೈತರ ತಂಬಾಕು ಬೆಳೆಗಳ ಸಮಸ್ಯೆ ನಿವಾರಿಸಲು ದೆಹಲಿಗೆ ಬಂದಿದ್ದೇನೆ. ಈ ಕುರಿತು ಗೃಹ ಸಚಿವ ಅಮಿತ್ ಶಾ, ಉಸ್ತುವಾರಿ ರಾಧಾ ಮೋಹನ್ ದಾಸ್, ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ ಮಾಡಿ ರಾಜ್ಯದಲ್ಲಿ ಮೈತ್ರಿ ಬಲಪಡಿಸುವ ಬಗ್ಗೆ, ಸ್ಥಳೀಯ ಚುನಾವಣೆ ಒಟ್ಟಾಗಿ ಎದುರಿಸುವ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದರು.
ಇನ್ನು ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸಮಾವೇಶದಿಂದ ಜನರಿಗೆ ಏನಾದರು ಉಪಯೋಗವಾಗಿದೇಯೋ? ಅವರು ಮಾಡಿರುವ ಹಗರಣಗಳನ್ನು ಮುಚ್ಚಿಹಾಕಲು ಇಂತದ ಸಮಾವೇಶ ಮಾಡಿ ಜನರ ತೆರಿಗೆ ದುಡ್ಡನ್ನು ಪೋಲು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಮಾವೇಶದಿಂದ ಎಚ್.ಡಿ.ದೇವೇಗೌಡರ ಕುಟುಂಬ ನಿಂದಿಸಿ ರಾಜಕೀಯವಾಗಿ ದುರ್ಬಲ ಮಾಡಲು ಹೊರಟಿದ್ದಾರೆ. ಇದರಿಂದ ನಾವು ಎದೆಗುಂದುವುದಿಲ್ಲ. ಮಂಡ್ಯದಲ್ಲಿ ನಾವು ಪಕ್ಷ ಸಂಘಟನೆ ಮತ್ತು ಜನರನ್ನು ಒಗ್ಗೂಡಿಸುವುದಕ್ಕಾಗಿ ಸಮಾವೇಶ ಮಾಡಬೇಕಾಯಿತು. ಆದರೆ ಕುಮಾರಸ್ವಾಮಿಯವರು ಸಂಸತ್‌ನ ಅಧಿವೇಶನದಲ್ಲಿ ಬ್ಯುಸಿಯಾಗಿರುವುದರಿಂದ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ ಎಂದರು.
ಉಪಚುನಾವಣೆಯಲ್ಲಿ 87,000 ಸಾವಿರ ಮತಗಳನ್ನು ಪಡೆದು ಸೋತಿದ್ದೇನೆ. ಇದು ಸೋಲಲ್ಲ. ಜನತೆ ಕ್ಷೇತ್ರದ ನಾಡಿಮಿಡಿತ ಅರಿಯಲು ನೀಡಿರುವ ಮತ್ತೊಂದು ಅವಕಾಶ ಎಂದು ಹೇಳಿದರು.
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…