ನವದೆಹಲಿ: ಜನತಾ ದಳದ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು, ಉಪಚುನಾವಣೆಯ ಬಳಿಕ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಜೀವನ ಕುರಿತಾದ ‘furrows in a field: the unexplored life of H.D.Devegowda’ ಗ್ರಂಥವನ್ನು ಬಿ.ಎಲ್.ಸಂತೋಷ್ ಅವರಿಗೆ ನೀಡಿದರು.
ಚನ್ನಪಟ್ಟಣದ ಸೋಲಿನ ಬಳಿಕ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ನಿಖಿಲ್ ಕುಮಾರಸ್ವಾಮಿ ಅವರು ಕೆಲವು ಪ್ರಮುಖ ಅಂಶಗಳನ್ನು ಸಂತೋಷ್ ಅವರೊಂದಿಗೆ ಹಂಚಿಕೊಂಡರು. ಈ ವೇಳೆ ನಿಖಿಲ್ ಅವರ ಮುಂದಿನ ರಾಜಕೀಯ ಜೀವನ ನಡೆ ಕುರಿತು ಬಿ.ಎಲ್.ಸಂತೋಷ್ ಅವರು ಕೆಲವು ಮಹತ್ವದ ಸಲಹೆ ಹಾಗೂ ಮಾರ್ಗದರ್ಶನ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿ.ಎಲ್. ಸಂತೋಷ್ ಭೇಟಿ ಮಾಡಿದ ವಿಚಾರದ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಸಂತೋ಼ಷ್ ಜಿ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದುಕೊಂಡು, ಚನ್ನಪಟ್ಟಣ ಚುನಾವಣೆ ವಿಷಯವಾಗಿ ಕೆಲ ಮಾಹಿತಿ ಕೇಳಿ ಪಡೆದರು. ಮುಂದೆ ಎನ್‌ಡಿಎ ಮೈತ್ರಿಕೂಟವನ್ನು ರಾಜ್ಯದಾದ್ಯಂತ ಬಲಪಡಿಸುವ ನಿಟ್ಟಿನಲ್ಲಿ ನನಗೆ ಮಾರ್ಗದರ್ಶನ ಕೊಟ್ಟರು ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…
ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…