Mysore
22
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ ದೃಷ್ಟಿಯಿಂದ ಅಮಿತ್‌ ಶಾ ಅವರಿಂದ ಮಾರ್ಗದರ್ಶನ ಪಡೆದರು.

ಈ ಬಗ್ಗೆ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ಕೇಂದ್ರ ಸಚಿವ ಅಮಿತ್‌ ಶಾ ಅವರ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಕೃತಜ್ಞನಾಗಿದ್ದೇನೆ.

ಅಮಿತ್‌ ಶಾ ಜೀ ಅವರ ಸಂಘಟನಾ ಚತುರತೆ, ನಾಯಕತ್ವ ಗುಣಗಳು ನನ್ನನ್ನು ಒಳಗೊಂಡಂತೆ ಅಸಂಖ್ಯಾತ ಯುವ ಜನರಿಗೆ ಪ್ರೇರಣಾದಾಯಕ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ನಿಖಿಲ್‌ ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋತರು ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹಲವು ಎನ್‌ಡಿಎ ನಾಯಕರನ್ನು ಭೇಟಿ ಮಾಡಿರುವ ಅವರು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

 

Tags:
error: Content is protected !!