ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ ದೃಷ್ಟಿಯಿಂದ ಅಮಿತ್ ಶಾ ಅವರಿಂದ ಮಾರ್ಗದರ್ಶನ ಪಡೆದರು.
ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಕೇಂದ್ರ ಸಚಿವ ಅಮಿತ್ ಶಾ ಅವರ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಕೃತಜ್ಞನಾಗಿದ್ದೇನೆ.
ಅಮಿತ್ ಶಾ ಜೀ ಅವರ ಸಂಘಟನಾ ಚತುರತೆ, ನಾಯಕತ್ವ ಗುಣಗಳು ನನ್ನನ್ನು ಒಳಗೊಂಡಂತೆ ಅಸಂಖ್ಯಾತ ಯುವ ಜನರಿಗೆ ಪ್ರೇರಣಾದಾಯಕ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ನಿಖಿಲ್ ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋತರು ಧೃತಿಗೆಡದೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.
ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹಲವು ಎನ್‌ಡಿಎ ನಾಯಕರನ್ನು ಭೇಟಿ ಮಾಡಿರುವ ಅವರು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…