ನವದೆಹಲಿ : ಈ ಬಾರಿಯ ಬಜೆಟ್ ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದಾಗಿ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್ ಮಂಡಿಸಿದ ನಿರ್ಮಾಲಾ ಸೀತಾರಾಮನ್, ಗಯಾವನ್ನು ಕಾಶಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಬಿಹಾರದ ರಾಜಗಿರಿ ಜೈನ ಮಂದಿರದ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸಲಾಗುವುದು ಎಂದು ಘೋಷಣೆ ಮಾಡಿದರು.
ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನ ಪ್ರಕಟಿಸಿದೆ. ಬಿಹಾರ ಒಡಿಸಾದ ಪ್ರವಾಸೋದ್ಯಮದ ಮೇಲೆ ಕೇಂದ್ರೀಕರಿಸಲಾಗಿದೆ. ಆರ್ಥಿಕತೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪ್ರವಾಸೋದ್ಯಮವು ಯಾವಾಗಲೂ ನಮ್ಮ ನಾಗರೀಕತೆಯ ಭಾಗವಾಗಿದೆ. ಭಾರತವನ್ನು ಜಾಗತಿಕ ಪ್ರವಾಸಿ ತಾಣವಾಗಿಸುವ ಪ್ರಯತ್ನಗಳು ಆರ್ಥಿಕ ಅವಕಾಶಗಳನ್ನು ಸೃಷ್ಠಿಸುತ್ತವೆ ಎಂದು ಹೇಳಿದರು.
ಅಲ್ಲದೆ ನಳಂದವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವುದರ ಜೊತೆಗೆ ನಳಂದವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಬಿಹಾರದ ವಿಷ್ಣುಪಾದ ದೇವಸ್ಥಾನ ಕಾರಿಡರ್ ಮತ್ತು ಮಹಾಬೋಧಿ ದೇವಸ್ಥಾನ ಕಾರಿಡಾರ್ ಅನ್ನು ಸರ್ಕಾರ ಅಭಿವೃದ್ಧಿಪಡಿಸಲಿದೆ. ಈ ತಾಣ ಅಪಾರ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಕಾಶಿ ವಿಶ್ವನಾಥ ಕಾರಿಡಾರ್ ನ ಮಾದರಿಯಲ್ಲಿ ಅವುಗಳನ್ನ ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಪರಿವರ್ತಿಸಲಾಗುವುದು. ಒಡಿಶಾದ ರಮಣೀಯ ಸೌಂದರ್ಯ ದೇವಾಲಯಗಳು ವನ್ಯಜೀವಿ ಮತ್ತು ಇತರ ವೈಶಿಷ್ಟ್ಯಗಳ ಮೂಲಕ ಅದನ್ನು ಪ್ರವಾಸಿ ತಾಣವನ್ನಾಗಿ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.