ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಈ ಬಗ್ಗೆ ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂದು ನಡೆದ ಘಟನೆ ನನಗೆ ಈಗಲೂ ನೆನಪಿದೆ. ಅವರ ಹೆಸರನ್ನು ನಾನು ಬಹಿರಂಗಪಡಿಸಲ್ಲ. ದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ. ಅಂತಹ ಮಹತ್ವಾಕಾಂಕ್ಷೆಯನ್ನು ನಾನು ಹೊಂದಿಲ್ಲ ಎಂದು ಖಡಕ್ ಆಗಿ ಹೇಳಿದರು.
ನಾನು ನನ್ನ ನಂಬಿಕೆಗಳಿಗೆ ಮತ್ತು ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗಾಗಿ ನನ್ನ ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಮೋದಿ ನಂತರ ಪ್ರಧಾನಿಯಾಗಲು ನಿತಿನ್ ಗಡ್ಕರಿ 3ನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿತ್ತು. ಇದೆಕ್ಕೆಲ್ಲಾ ನಿತಿನ್ ಗಡ್ಕರಿ ಅಂತ್ಯ ಹಾಡಿದ್ದಾರೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…