ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು.
ಬಿಜೆಪಿ ಇತಿಹಾಸದಲ್ಲೇ ಅತಿ ಚಿಕ್ಕ ವಯಸ್ಸಿನಲ್ಲೇ ಪಕ್ಷದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಕೀರ್ತಿಗೆ ಪಾತ್ರರಾಗಿದ್ದಾರೆ. ಜೊತೆಗೆ ಕೇಂದ್ರದ ಹಾಲಿ ಸಚಿವ ನಿತಿನ್ ಗಡ್ಕರಿ ಅವರ ಹೆಸರಿನಲ್ಲಿ ಇದ್ದ ದಾಖಲೆಯನ್ನು ಮುರಿದಿದ್ದಾರೆ.
ನವದೆಹಲಿಯಲ್ಲಿರುವ ದೀನ್ ದಯಾಳ್ ಉಪಾಧ್ಯಾಯ್ ಮಾರ್ಗದಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ನಿರ್ಗಮಿತ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಷಾ ಸೇರಿದಂತೆ ಹಲವರ ಸಮುಖದಲ್ಲಿ ನಬಿನ್ ಕುರ್ಚಿ ಅಲಂಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡುತ್ತಿದ್ದಂತೆ ವೇದಿಕೆಯ ಮುಂಭಾಗದಲ್ಲಿದ್ದ ಪ್ರಮುಖರು ಹಾಗೂ ಕಚೇರಿ ಹೊರಭಾಗದಲ್ಲಿದ್ದ ಕಾರ್ಯಕರ್ತರು ಜೈಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪಕ್ಷದೊಳಗೆ ಅವರ ಉನ್ನತ ಸ್ಥಾನಮಾನವನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ, ನಿತಿನ್ ನಬಿನ್ ಅವರನ್ನು ಸನಾನಿಸಿದರು.
ಬಿಜೆಪಿ ನೂತನ ಅಧ್ಯಕ್ಷರ ಔಪಚಾರಿಕ ಘೋಷಣೆಯಿಂದ ವಾರಗಳ ಕಾಲ ನಡೆದ ಆಂತರಿಕ ಚರ್ಚೆಗಳಿಗೆ ತೆರೆಬಿದ್ದಿದೆ. ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದಂತಹ ನಿರ್ಣಾಯಕ ರಾಜ್ಯಗಳು ಈ ವರ್ಷದ ಕೊನೆಯಲ್ಲಿ ಹೊಸ ಸರ್ಕಾರಕ್ಕೆ ಮತ ಚಲಾಯಿಸಲು ಸಜ್ಜಾಗಿರುವುದರಿಂದ ಪಕ್ಷವು ನೂತನ ಅಧ್ಯಕ್ಷರನ್ನು ಮುನ್ನೆಲೆಗೆ ತಂದು ಚುನಾವಣಾ ಅಖಾಡಕ್ಕಿಳಿಯಲು ಮುಂದಾಗಿದೆ.
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…