Mysore
20
broken clouds

Social Media

ಬುಧವಾರ, 18 ಮಾರ್ಚ್ 2026
Light
Dark

ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಹಾಗೂ ಡಿಸಿಎಂ ಆಗಿ ಸಾಮ್ರಾಟ್‌ ಚೌಧರಿ, ವಿಜಯ್‌ ಕುಮಾರ್‌ ಸಿನ್ಹಾ ಅವರಿಂದು ಪ್ರಮಾಣವಚನ ಸ್ವೀಕಾರ ಮಾಡಿದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಿದ ನಂತರ ನಿತೀಶ್‌ ಕುಮಾರ್‌ ಅವರು ಇಂದು ಬೆಳಿಗ್ಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಎನ್‌ಡಿಎ ನೇತೃತ್ವದಲ್ಲಿ ನಿತೀಶ್‌ ಕುಮಾರ್‌ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಹೊಸ ಸರ್ಕಾರ ರಚನೆ ಆಗುತ್ತಿದೆ.

ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ೧೦ನೇ ಬಾರಿಗೆ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿದ್ದರು.

Tags:
error: Content is protected !!