ಪಾಟ್ನಾ: ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಹಾಗೂ ಡಿಸಿಎಂ ಆಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಅವರಿಂದು ಪ್ರಮಾಣವಚನ ಸ್ವೀಕಾರ ಮಾಡಿದರು.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಿದ ನಂತರ ನಿತೀಶ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಎನ್‌ಡಿಎ ನೇತೃತ್ವದಲ್ಲಿ ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಹೊಸ ಸರ್ಕಾರ ರಚನೆ ಆಗುತ್ತಿದೆ.
ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ೧೦ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿದ್ದರು.
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್…
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್…
ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…
ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್…
ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…
ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…